ನವದೆಹಲಿ: ಭಾರತದಲ್ಲಿ ಮಹಾಮಾರಿ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. 24 ಗಂಟೆಯಲ್ಲಿ 48,513 ಸೋಂಕಿತರು ದೇಶದಲ್ಲಿ ಪತ್ತೆಯಾಗಿದ್ದು, ಒಂದೇ ದಿನದಲ್ಲಿ 768 ಮಂದಿ ಸಾವನ್ನಪ್ಪಿದ್ದಾರೆ.
ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 15 ಲಕ್ಷದ 31 ಸಾವಿರ ದಾಟಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 34,193ಕ್ಕೆ ಏರಿಕೆಯಾಗಿದೆ.
ಸದ್ಯಕ್ಕೆ ವಿವಿಧ ಆಸ್ಪತ್ರೆಗಳಲ್ಲಿ 5,09,447 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಕೆಯ ಪ್ರಮಾಣವೂ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈವರೆಗೆ 9,88,030 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸೋಂಕಿತರಲ್ಲಿ ಸಾವಿನ ಪ್ರಮಾಣ ಶೇಕಡಾ 2.23ರಷ್ಟಿದ್ದರೆ. ಆಸ್ಪತ್ರೆಯಿಂದ ಬಿಡುಗಡೆಯಾಗುವವರ ಪ್ರಮಾಣ ಶೇಕಡಾ 64.51ರಷ್ಟಿದೆ.