ದಂಕುನಿ(ಪಶ್ಚಿಮ ಬಂಗಾಳ):ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.
ದಂಕುನಿಯಲ್ಲಿ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು. ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಇನ್ನು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿರುವುದರಿಂದ ಪೊಲೀಸರು ಬಿಜೆಪಿ ಕಾರ್ಯಕರ್ತರಲ್ಲಿ ಮೊದಲು ಮನವಿ ಮಾಡಿದ್ದಾರೆ. ಅವರ ಮನವಿಗೆ ಬಿಜೆಪಿ ಕಾರ್ಯಕರ್ತರು ಬಗ್ಗದೆ ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆ ಕಾವು ಹೆಚ್ಚಾಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಇನ್ನು ಹೆದ್ದಾರಿಯ ಪ್ರಮುಖ ನಗರಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ನ್ನು ಪೊಲೀಸ್ ಇಲಾಖೆ ನಿಯೋಜಿಸಿದೆ.