ಲಾತೂರ್ (ಮಹಾರಾಷ್ಟ್ರ) :ಅಪ್ರಾಪ್ತ ವಯಸ್ಸಿನ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೊಬ್ಬನ್ನನು ಪೊಲೀಸರು ಬಂಧಿಸಿದ್ದಾರೆ.
ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ - ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ
ಮಹಾರಾಷ್ಟ್ರದ ಲಾತೂರ್ ಎಂಬಲ್ಲಿ ತನ್ನ ಸ್ವಂತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ
ಔಸಾದಲ್ಲಿ ಶಿಕ್ಷಕನಾಗಿರುವ ಪರಮೇಶ್ವರ್ ಪಾವ್ಲೆ ಮಗಳಿಗೆ ಕಿರುಕುಳ ನೀಡಿದ ವ್ಯಕ್ತಿ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯ ಕುಟುಂಬ ವಾಸವಾಗಿರುವ ಸುಶೀಲದೇವಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ಆಕೆಯ ಅಪ್ಪ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿಯ ತಾಯಿ ದೂರು ನೀಡಿದ್ದರು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ನಾವು ಆರೋಪಿಯನ್ನು ಬಂಧಿಸಿದ್ದೇವೆ ಎಂದು ಸಹಾಯಕ ಇನ್ಸ್‌ಪೆಕ್ಟರ್ ಸಂಜಯ್ ಪವಾರ್ ಹೇಳಿದ್ದಾರೆ.
Last Updated : Jun 9, 2020, 9:06 AM IST