ನವದೆಹಲಿ :ನೂತನ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಡಿಸೆಂಬರ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಪಾರ್ಲಿಮೆಂಟ್ ಹೌಸ್ ಸಂಕೀರ್ಣದಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಂದೇಶ ನೀಡಲಿದ್ದಾರೆ. ಪ್ರಧಾನಿ ಮೋದಿ ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಈ ವೇಳೆ ಭಾಷಣ ಮಾಡಲಿದ್ದಾರೆ.
971 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಂಸತ್ ಭವನವನ್ನು 64,500 ಚದರ ಮೀಟರ್ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದೆ. ಇದು ಹಳೆಯ ಸಂಸತ್ತಿನ ಕಟ್ಟಡಕ್ಕಿಂತ 17,000 ಚ. ಮೀ ದೊಡ್ಡದಾಗಿರಲಿದೆ.