ನವದೆಹಲಿ: ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ನಿನ್ನೆ ಕೊನೆಯುಸಿರೆಳೆದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ (74) ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.
ಪಾಸ್ವಾನ್ಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರಿಂದ ಅಂತಿಮ ನಮನ - Leaders pay last respects to Ram Vilas Paswan
ನಿನ್ನೆ ವಿಧಿವಶರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾದ ದಲತ ನಾಯಕ, ಎಲ್ಜೆಡಿ ಮುಖಂಡ ಪಾಸ್ವಾನ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಯಿತು. ಇಲ್ಲಿಗೆ ಆಗಮಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ಸೇರಿದಂತೆ ಇತರ ಗಣ್ಯರು ಪಾಸ್ವಾನ್ ಅವರ ಅಂತಿಮ ದರ್ಶನವನ್ನು ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್ ಅವರು ಎಲ್ಜೆಪಿ ಪಕ್ಷದ ನಾಯಕರಾಗಿದ್ದು, ಎನ್ಡಿಎ ಜತೆ ಕೈ ಜೋಡಿಸಿ, ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಐದು ದಶಕಗಳಿಗಿಂತಲೂ ಹೆಚ್ಚು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಅವರು, ಕಳೆದ ಕೆಲವು ವಾರಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.