ಕರ್ನಾಟಕ

karnataka

ETV Bharat / bharat

ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ - youth day celebration in jammu kashmir

24ನೇ ರಾಷ್ಟ್ರೀಯ ಯುವ ಯುವಜನೋತ್ಸವದ ಅಡಿ ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆಯು ಭೌತಿಕ ಹಾಗೂ ವರ್ಚುಯಲ್ ಮೋಡ್ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

By

Published : Jan 9, 2021, 2:33 PM IST

ಜಮ್ಮು ಕಾಶ್ಮೀರ:ಇಲ್ಲಿನ ಶಿಕ್ಷಕರ ಭವನದಲ್ಲಿ ಇಂದು ರಾಷ್ಟ್ರೀಯ ಯುವಜನೋತ್ಸವ ಆಚರಿಸಲಾಯಿತು. ಈ ಸಂಭ್ರಮಾಚರಣೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಭಾಗವಹಿಸಿದ್ದರು.

ಸ್ವಾಮಿ ವಿವೇಕಾನಂದರ ಜನ್ಮ ದಿನದ ನೆನಪಿಗಾಗಿ ಪ್ರತಿವರ್ಷ ಯುವಜನೋತ್ಸವ ಆಚರಿಸಲಾಗುತ್ತದೆ. ಈ ಬಾರಿಯ 24ನೇ ರಾಷ್ಟ್ರೀಯ ಯುವ ಉತ್ಸವದ ಅಡಿ ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆಯು ಭೌತಿಕ ಹಾಗೂ ವರ್ಚುಯಲ್ ಮೋಡ್ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಯುವಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ

ಈ ಸಂದರ್ಭದಲ್ಲಿ ಮಾತನಾಡಿದ ಲೆಫ್ಟಿನೆಂಟ್ ಗವರ್ನರ್, ಜಮ್ಮು ಮತ್ತು ಕಾಶ್ಮೀರದ ಯುವ ಪ್ರತಿಭೆಗಳನ್ನು ಉತ್ತೇಜಿಸಲು ದೃಢ ವ್ಯವಸ್ಥೆ ರಚಿಸಬೇಕೆಂದು ಕರೆ ನೀಡಿದರು. ಈ ದಿನಾಚರಣೆಯ ಮಹತ್ವ ಒತ್ತಿಹೇಳಿದ ಲೆಫ್ಟಿನೆಂಟ್ ಗವರ್ನರ್, ದೇಶದ ಯುವಕರನ್ನು ಒಗ್ಗೂಡಿಸಲು ಒಂದು ವೇದಿಕೆಯನ್ನು ಒದಗಿಸುವುದು, ವಿವಿಧ ಚಟುವಟಿಕೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶಗಳನ್ನು ನೀಡುವುದು, ಯುವಕರಲ್ಲಿ ಕೋಮು ಸೌಹಾರ್ದತೆ ಮತ್ತು ಸಹೋದರತ್ವದ ಮನೋಭಾವವನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಯುವಜನೋತ್ಸವದ ಸಂದರ್ಭದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಾದ ಸಂಗೀತ, ನೃತ್ಯ, ರಂಗಭೂಮಿ, ವಿಷುಯಲ್ ಆರ್ಟ್, ಅಭಿವ್ಯಕ್ತಿ ಕಲೆ, ಸ್ಥಳೀಯ ಆಟಗಳು ಇತ್ಯಾದಿಗಳನ್ನು ಪ್ರದರ್ಶಿಸಲಾಯಿತು.

ABOUT THE AUTHOR

...view details