ಭುವನೇಶ್ವರ: ಧಾರಾಕಾರ ಮಳೆಯಿಂದಾಗಿ ಪ್ರವಾಹಕ್ಕೆ ತತ್ತರಿಸಿರುವ ಒಡಿಶಾದಲ್ಲಿ ಸಿಡಿಲು ಬಡಿದು 12 ವರ್ಷದ ಬಾಲಕಿ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಒಡಿಶಾದಲ್ಲಿ ಸಿಡಿಲಬ್ಬರ: ಒಂದೇ ದಿನ ಆರು ಜನರು ಬಲಿ - ಒಡಿಶಾದಲ್ಲಿ ಸಿಡಿಲು ಬಡಿದು ಆರು ಜನರು ಬಲಿ
ಒಡಿಶಾದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಆರು ಮಂದಿ ಮೃತಪಟ್ಟಿದ್ದಾರೆ.
ಒಡಿಶಾದಲ್ಲಿ ಸಿಡಿಲಬ್ಬರ
ಕಿಯೋಂಜಾರ್ ಜಿಲ್ಲೆಯಲ್ಲಿ ನಾಲ್ವರು ಹಾಗೂ ಬಾಲಸೋರ್ ಜಿಲ್ಲೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಸಂಭವಿಸಿದ ವೇಳೆ ಮೂವರು ರೈತರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. 12 ವರ್ಷದ ಬಾಲಕಿ ಮನೆ ಮುಂದೆ ಆಟವಾಡುತ್ತಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಳಿದಂತೆ 28 ವರ್ಷದ ಯುವಕ, 59 ವರ್ಷದ ಮಹಿಳೆ ಸಿಡಿಲಿಗೆ ಬಲಿಯಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.