ಕರ್ನಾಟಕ

karnataka

ETV Bharat / bharat

ಜೆಇಇ, ನೀಟ್​ ಪರೀಕ್ಷೆ ಮುಂದೂಡಿ: ವಿದ್ಯಾರ್ಥಿಗಳ ಕೂಗು ಕೇಳುವಂತೆ ರಾಗಾ ಆಗ್ರಹ - Rahul Gandhi tweet

ಪ್ರಮುಖ ಪ್ರವೇಶ ಪರೀಕ್ಷೆಗಳಾದ ಜೆಇಇ ಮತ್ತು ನೀಟ್​ ಮುಂದೂಡುವಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿ ಶಿಕ್ಷಣ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

urge to postpone JEE and NEET
ರಾಹುಲ್ ಗಾಂಧಿ

By

Published : Aug 23, 2020, 3:34 PM IST

ನವದೆಹಲಿ:ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮುಂದೂಡಬೇಕೆಂಬ ವಿದ್ಯಾರ್ಥಿಗಳ ಕೂಗನ್ನು ಸರ್ಕಾರ ಗಣನೆಗೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಸೆಪ್ಟೆಂಬರ್ 1 ರಿಂದ 6 ರವರೆಗೆ ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸೆಪ್ಟೆಂಬರ್ 13 ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹೇಳಿದೆ.

ಲಕ್ಷಾಂತರ ವಿದ್ಯಾರ್ಥಿಗಳು ಜಿಇಇ, ನೀಟ್​ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸುತ್ತಿದ್ದಾರೆ. ಸರ್ಕಾರ ವಿದ್ಯಾರ್ಥಿಗಳ ಮನದ ಮಾತನ್ನು ಆಲಿಸಬೇಕು ಮತ್ತು ಅದಕ್ಕೆ ಪರಿಹಾರ ಒದಗಿಸಬೇಕೆಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷ (ಎಎಪಿ) ದ ಮುಖಂಡ ಮತ್ತು ದೆಹಲಿಯ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಕೂಡ ಜೆಇಇ ಮತ್ತು ನೀಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಜೆಇಇ, ನೀಟ್ ಹೆಸರಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನದೊಂದಿಗೆ ಆಟವಾಡುತ್ತಿದೆ. ಈ ಎರಡೂ ಪರೀಕ್ಷೆಗಳನ್ನು ತಕ್ಷಣವೇ ರದ್ದುಗೊಳಿಸಿ ಈ ವರ್ಷ ಪ್ರವೇಶಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಕೇಂದ್ರಕ್ಕೆ ಮನವಿ ಮಾಡುತ್ತೇನೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಉತ್ತಮ ನಿರ್ಧಾರದಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ.

ಕೋವಿಡ್​ ಸಮಸ್ಯೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಪ್ರವೇಶ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಮತ್ತು ಪೋಷಕರು ಸರ್ಕಾರವನ್ನು ಆಗ್ರಹಿಸುತ್ತಿದ್ದು, ಇದಕ್ಕೆ ರಾಜಕೀಯ ನಾಯಕರು ಧ್ವನಿಗೂಡಿಸಿದ್ದಾರೆ.

ABOUT THE AUTHOR

...view details