ನವದೆಹಲಿ:ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿನ್ನೆ ನವದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆಗೆ ಮುಂಚಿತವಾಗಿ ಅವರ ಕೊರೊನಾ ಪರೀಕ್ಷೆ ಮಾಡಿಸಿದ್ದಾಗ ಪಾಸಿಟಿವ್ ಸಹ ಬಂದಿತ್ತು.
ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದನ್ನು ತೆಗೆದುಹಾಕಲು ಮಿಲಿಟರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.
"ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ" ಎಂದು ಮೂಲಗಳು ತಿಳಿಸಿವೆ.
ಅವರ ದೇಹದ ಪ್ರಮುಖ ನಿಯತಾಂಕಗಳು ಸ್ಥಿರವಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಮಲ್ಟಿಡಿಸಿಪ್ಲಿನರಿ ತಂಡದ ವೈದ್ಯರು 84 ವರ್ಷದ ಪ್ರಣಬ್ ಮುಖರ್ಜಿ ಅವರ ಆರೋಗ್ಯವನ್ನು ನಿರಂತರವಾಗಿ ಗಮನಿಸುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ರಾಜಕೀಯ ನಾಯಕರು ಸೇರಿದಂತೆ ಹಲವರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.