ನವದೆಹಲಿ:ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿರುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ, ಶಾಪಿಂಗ್ ಮಾಲ್‌ಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ನಗರ ಪ್ರದೇಶಗಳಲ್ಲಿ, ಎಲ್ಲಾ ಪ್ರತ್ಯೇಕ ಅಂಗಡಿಗಳು, ನೆರೆಹೊರೆಯ ಅಂಗಡಿಗಳು ಮತ್ತು ವಸತಿ ಸಂಕೀರ್ಣಗಳಲ್ಲಿನ ಅಂಗಡಿಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
ಅಂಗಡಿಗಳನ್ನು ತೆರೆಯಲು ಅನುಮತಿ ವಿಚಾರ... ಏನಿರುತ್ತೆ? ಏನಿರಲ್ಲ? ಎಂಬ ಬಗ್ಗೆ ಕೇಂದ್ರದ ಸ್ಪಷ್ಟನೆ
ಕೆಲ ಷರತ್ತುಗಳೊಂದಿಗೆ ಅಂಗಡಿಗಳನ್ನು ತೆರೆಯಲು ಕೇಂದ್ರ ಅನುಮತಿ ನೀಡಿತ್ತು. ಆದರೆ ಈ ಬಗ್ಗೆ ಗೊಂದಲ ಸೃಷ್ಟಿಯಾಗಿದ್ದರಿಂದ ಮತ್ತೊಮ್ಮೆ ಸ್ಪಷ್ಟನೆ ನೀಡಿದೆ.
ಅಂಗಡಿಗಳನ್ನು ತೆರೆಯಲು ಅನುಮತಿ
ಏನಿರುತ್ತೆ, ಏನಿರಲ್ಲ:
- ಗ್ರಾಮೀಣ ಪ್ರದೇಶಗಳಲ್ಲಿ, ಶಾಪಿಂಗ್ ಮಾಲ್‌ಗಳಲ್ಲಿರುವ ಅಂಗಡಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶವಿದೆ.
- ನಗರ ಪ್ರದೇಶಗಳಲ್ಲಿ ಎಲ್ಲಾ ಸ್ವತಂತ್ರ, ನೆರೆಹೊರೆಯ ಅಂಗಡಿಗಳು ಮತ್ತು ವಸತಿ ಸಮುಚ್ಚಯಗಳಲ್ಲಿನ ಅಂಗಡಿಗಳನ್ನು ತೆರೆಯಲು ಅನುಮತಿ.
- ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯ ವಸತಿ ಸಮುಚ್ಚಯಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಶೇ.50ರಷ್ಟು ಮಂದಿ ಮಾತ್ರ ಕರ್ತವ್ಯ ನಿರ್ವಹಿಸಬೇಕು ಮತ್ತು ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯ ಎಂದಿದೆ.
- ಇ-ಕಾಮರ್ಸ್ ಮೂಲಕ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
- ಮದ್ಯ ಮತ್ತು ಇತರೆ ವಸ್ತುಗಳ ಮಾರಾಟದ ಮೇಲಿನ ನಿಷೇಧ ಮುಂದುವರೆಯಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.