ನವದೆಹಲಿ: ಲಾಕ್‌ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲು ಬರುವವರನ್ನು ಪೊಲೀಸರು ಹೊಡೆಯುವುದನ್ನು ನಿರ್ಬಂಧಿಸುವುದು ಮತ್ತು ಸಾರ್ವಜನಿಕರ ಸಂಚಾರವನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಾಧೀಶರಾದ ಎನ್.ವಿ. ರಮಣ, ಎಸ್.ಕೆ. ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನ್ಯಾಯಪೀಠವು ಈ ಅರ್ಜಿಯಲ್ಲಿ ನಮಗೆ ಯಾವುದೇ ಮೌಲ್ಯ ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಆದೇಶದಲ್ಲಿ ತಿಳಿಸಿದೆ.
ಗುವಾಹಟಿ ಮೂಲದ ವಕೀಲರೊಬ್ಬರು ಸಲ್ಲಿಸಿದ ಮನವಿಯಲ್ಲಿ, ಅಗತ್ಯ ಸರಕುಗಳನ್ನು ಖರೀದಿಸಲು ಮನೆಗಳಿಂದ ಹೊರಹೋಗುವ ಜನಸಂದಣಿ ಚಲನೆಯನ್ನು ನಿಯಂತ್ರಿಸಲು ಮಾರ್ಗಸೂಚಿಗಳ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿತ್ತು.