ನವದೆಹಲಿ: ದೇಶಾದ್ಯಂತ ಕೊರೊನಾ ವಿರುದ್ಧದ ಹೋರಾಟ ಮುಂದುವರಿದಿದ್ದು, ಇದರ ಮಧ್ಯೆ ದೇಶದಲ್ಲಿ ಇಂದಿನಿಂದ ಜೂನ್ 30ರವರೆಗೆ ಲಾಕ್ಡೌನ್ 5.0 ಜಾರಿಯಲ್ಲಿರಲಿದೆ. ಈ ವೇಳೆ ಅನೇಕ ಸಡಲಿಕೆ ನೀಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಹಾಕಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಹೇಳಲಾಗಿದೆ. ಬಸ್, ರೈಲ್ವೆ ನಿಲ್ದಾಣಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ,ಮಧ್ಯಪಾನ, ಪಾನ್ ಮಸಾಲ, ಗುಟ್ಕಾ ಸೇವನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಬರುವಂತಿಲ್ಲ.
ಮದುವೆ ಕಾರ್ಯಕ್ರಮ, ಅಂತ್ಯ ಸಂಸ್ಕಾರದ ವೇಳೆ ಹೆಚ್ಚು ಜನರು ಸೇರಲು ನಿರ್ಬಂಧ ಹೇರಲಾಗಿದ್ದು, ಮದುವೆ ಕಾರ್ಯಕ್ರಮಕ್ಕೆ 50 ಹಾಗೂ ಅಂತ್ಯ ಸಂಸ್ಕಾರದಲ್ಲಿ 20 ಜನರು ಮಾತ್ರ ಭಾಗಿಯಾಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಂತಿಲ್ಲ.