ಅಗರ್ತಲಾ (ತ್ರಿಪುರ): ಸಿಕ್ಕಿ ಸೇರಿದಂತೆ 8 ಈಶಾನ್ಯ ರಾಜ್ಯಗಳಲ್ಲಿ ಕಟ್ಟುನಿಟ್ಟಾಗಿ ಲಾಕ್ಡೌನ್ ಪಾಲಿಸಲಾಗುತ್ತಿದೆ ಎಂದು ಈಶಾನ್ಯ ರಾಜ್ಯಗಳ ಅಭಿವೃದ್ದಿ ಸಚಿವ ಜಿತೇಂದ್ರ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಅಧಿಕೃತ ಪತ್ರಿಕಾ ಹೇಳಿಕೆಯಲ್ಲಿ ಈ ರೀತಿಯಾಗಿ ಉಲ್ಲೇಖಿಸಿರುವ ಅವರು ಲಾಕ್ಡೌನ್ ಹಾಗೂ ಸಾಮಾಜಿಕ ಅಂತರವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಅದ್ರಲ್ಲೂ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಇದರ ಜೊತೆಗೆ ಈಶಾನ್ಯ ರಾಜ್ಯಗಳ ಅಭಿವೃದ್ದಿ ಇಲಾಖೆ ಹಾಗೂ ಈಶಾನ್ಯ ಮಂಡಳಿಯಿಂದ ಈ ರಾಜ್ಯಗಳು ಕೊರೊನಾ ವಿರುದ್ಧ ಹೋರಾಡುವ ಸಲುವಾಗಿ ಸುಮಾರು 25 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.