ಮುಂಬೈ : ರಾಜ್ಯದ ಐದು ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡದಿರಲು ಸರ್ಕಾರ ತೀರ್ಮಾನಿಸಿದೆ.
ಸೋಲಾಪುರ, ಔರಂಗಾಬಾದ್, ಜಲ್ನಾ, ಬುಲ್ಖಾನಾ ಮತ್ತು ಅಮರಾವತಿ ಜಿಲ್ಲೆಗಳಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನಿರಾಕರಿಸಲಾಗಿದ್ದು, ಕೊರೊನಾ ವೈರಸ್ ಹರಡುವುದನ್ನು ತಡೆಯುವ ಸಲುವಾಗಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಬುಲ್ಖಾನಾ ಮತ್ತು ಅಮರಾವತಿ ಜಿಲ್ಲಾಡಳಿತಗಳು ಮೇ 17 ರವರೆಗೆ ಮದ್ಯ ಮಾರಾಟ ನಿಷೇಧಿಸಲು ನಿರ್ಧರಿಸಿದ್ದು, ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಿದೆ. ಔರಂಗಾಬಾದ್‌ನಲ್ಲಿ ಹಲವಾರು ಮದ್ಯ ತಯಾರಿಕೆ ಮತ್ತು ಬಾಟ್ಲಿಂಗ್ ಘಟಕಗಳಿದ್ದು ಅವುಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಮಾರಾಟವನ್ನು ನಿರ್ಬಂಧಿಸಲಾಗಿದೆ.
ಇನ್ನು ನಾಗ್ಪುರ ಪುರಸಭೆಯು ಇದೇ ನಿರ್ಧಾರವನ್ನು ಕೈಗೊಂಡಿದ್ದು, ಪುರಸಭೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದೆ.