ನವದೆಹಲಿ:ದೇಶದಲ್ಲಿ ಹೇರಲಾಗಿರುವ 2ನೇ ಹಂತದ ಲಾಕ್ಡೌನ್ ಮೇ 3ಕ್ಕೆ ಮುಕ್ತಾಯಗೊಳ್ಳಲಿದ್ದು, ತದನಂತರ ದೇಶದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸುವುದಾಗಿ ಕೇಂದ್ರ ಗೃಹ ಇಲಾಖೆ ಟ್ವೀಟ್ ಮೂಲಕ ಮಾಹಿತಿ ಬಿತ್ತರಿಸಿದೆ.
ಇದೇ ವೇಳೆ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಗಣನೀಯ ಪ್ರಮಾಣದಲ್ಲಿ ಸಡಿಲಗೊಳಿಸುವುದಾಗಿ ತಿಳಿಸಿದ್ದು, ಕೊರೊನಾ ಸೋಂಕು ಇಲ್ಲದ ಜಿಲ್ಲೆಗಳಲ್ಲಿನ ಜನರು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ.
ಈಗಾಗಲೇ ವಿವಿಧ ರಾಜ್ಯಗಳಲ್ಲಿರುವ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರು ತಮ್ಮ ತಮ್ಮ ಊರಿಗೆ ತೆರಳಲು ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ಎಲ್ಲ ರಾಜ್ಯಗಳಿಗೂ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.