ನವದೆಹಲಿ:ಇಂದು ಲೋಕಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ನಡೆಯುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.
ಫಲಿತಾಂಶದ ವೇಳೆ ಹಿಂಸಾಚಾರ ನಡೆಯಬಹುದಾದ್ದರಿಂದ ಮುನ್ನೆಚ್ಚರಿಕೆ ವಹಿಸಬೇಕೆಂದು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಗೃಹ ಇಲಾಖೆ ಸೂಚನೆ ನೀಡಿದೆ.