ನವದೆಹಲಿ:ಪುಲ್ವಾಮಾ ದಾಳಿಯಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಿಲ್ಲ ಎಂದು ಗೃಹ ಸಚಿವಾಲಯದ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ಲೋಕಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ಪುಲ್ವಾಮಾದಲ್ಲಿ ನಡೆದಿದ್ದ ದಾಳಿ ಗುಪ್ತಚರ ಇಲಾಖೆಯ ವೈಫಲ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಿಶನ್ ರೆಡ್ಡಿ, ಕಳೆದ 3 ದಶಕಗಳಿಂದ ಜಮ್ಮು-ಕಾಶ್ಮೀರ ಉಗ್ರರ ದಾಳಿಯಿಂದ ತತ್ತರಿಸಿದೆ.
ಪುಲ್ವಾಮಾ ದಾಳಿಯಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಇಲ್ಲ: ಕೇಂದ್ರದ ಸ್ಪಷ್ಟನೆ - ಗೃಹ ಸಚಿವಾಲಯ
ಸೇನಾ ಪಡೆಗಳು ಕೂಡ ನೂರಾರು ಉಗ್ರರನ್ನು ಹೊಡೆದುರುಳಿಸೋ ಮೂಲಕ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡಿವೆ. ಎಲ್ಲ ಭದ್ರತಾ ಸಂಸ್ಥೆಗಳು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.
ಸೇನಾ ಪಡೆಗಳು ಕೂಡ ನೂರಾರು ಉಗ್ರರನ್ನು ಹೊಡೆದುರುಳಿಸೋ ಮೂಲಕ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಂಡಿವೆ. ಎಲ್ಲ ಭದ್ರತಾ ಸಂಸ್ಥೆಗಳು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿವೆ. ಗುಪ್ತಚರ ಇಲಾಖೆ ಭದ್ರತಾ ಸಂಸ್ಥೆಗಳೊಂದಿಗೆ ಅಗತ್ಯ ಮಾಹಿತಿ ನೀಡುತ್ತಿದೆ. ಪುಲ್ವಾಮಾ ದಾಳಿ ಸಂಬಂಧ ಎನ್ ಐಎ ತನಿಖೆ ನಡೆಸುತ್ತಿದ್ದು, ಆತ್ಮಾಹುತಿ ದಾಳಿಕೋರರು ಹಾಗೂ ದಾಳಿಗೆ ವಾಹನ ನೀಡಿದ್ದವರನ್ನು ತನಿಖಾಧಿಕಾರಿಗಳು ಗುರುತಿಸಿದ್ದಾರೆ ಎಂದು ಸಂಸತ್ ಗೆ ಹೇಳಿದರು.
ಕಳೆದ ಫೆಬ್ರವರಿ 14 ರಂದು ಪುಲ್ವಾಮಾ ಜಿಲ್ಲೆಯ ದಕ್ಷಿಣ ಕಾಶ್ಮೀರದಲ್ಲಿ ರಸ್ತೆ ಮೂಲಕವಾಗಿ 2,500 ಯೋಧರು ಸೇನಾ ವಾಹನಗಳಲ್ಲಿ ಹೋಗುತ್ತಿದ್ದಾಗ ಉಗ್ರರು ಸೇನಾ ವಾಹನಕ್ಕೆ ಕಾರನ್ನು ಗುದ್ದಿಸಿ, ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದರು. ಪರಿಣಾಮ 40 ಯೋಧರು ಹುತಾತ್ಮರಾಗಿದ್ದರು. ಜೈಷ್- ಎ - ಮೊಹಮ್ಮದ್ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿತ್ತು. ಘಟನೆ ನಡೆದ ಕೆಲವೇ ದಿನಗಳ ಅಂತರದಲ್ಲಿ ಸೇನೆ ಪಾಕಿಸ್ತಾನದ ಬಾಲ್ ಕೋಟ್ ಮೇಲೆ ದಾಳಿ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದರು.