ನವದೆಹಲಿ: ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಬರೋಬ್ಬರಿ 144 ರೂ ಏರಿಕೆ ಮಾಡಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ ಕೇಂದ್ರ ಸರ್ಕಾರ ಇದೀಗ ಗುಡ್ನ್ಯೂಸ್ ನೀಡಲು ಮುಂದಾಗಿದೆ ಎಂಬ ಮಾತು ಎಲ್ಲಡೆಯಿಂದ ಕೇಳಿ ಬರುತ್ತಿದೆ.
ಎಲ್ಪಿಜಿ ದರ ಏರಿಕೆ ಬೆನ್ನಲ್ಲೇ ಗ್ರಾಹಕರಿಗೆ ಮುಂದಿನ ತಿಂಗಳು ಗುಡ್ ನ್ಯೂಸ್! - Union minister Dharmendra Pradhan
ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಮುಂದಿನ ತಿಂಗಳ ಸ್ವಲ್ಪ ಮಟ್ಟದ ಇಳಿಕೆ ಕಂಡು ಬರುವ ಸಾಧ್ಯತೆ ದಟ್ಟವಾಗಿದ್ದು, ಈ ಸಂಬಂಧ ಕೇಂದ್ರ ಸಚಿವರು ಮುನ್ಸೂಚನೆ ನೀಡಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ಎಲ್ಪಿಜಿ ದರದಲ್ಲಿ ಇಷ್ಟೊಂದು ಏರಿಕೆಯಾಗಲು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಾದ ಬದಲಾವಣೆಗಳೇ ಕಾರಣ. ಬರುವ ದಿನಗಳಲ್ಲಿ ಇದೇ ದರ ಮುಂದುವರಿಯುವುದು ತೀರಾ ಕಡಿಮೆಯಾಗಿದ್ದು, ಮುಂದಿನ ತಿಂಗಳ ಬೆಲೆಯಲ್ಲಿ ಕೊಂಚ ಕಡಿಮೆಯಾಗಲಿದೆ ಎಂದಿದ್ದಾರೆ.
ಛತ್ತೀಸ್ಗಢದಲ್ಲಿ ನೈಸರ್ಗಿಕ ಗ್ಯಾಸ್ ಪ್ಲ್ಯಾಟ್ಗೆ ಭೇಟಿ ನೀಡಿದ್ದ ವೇಳೆ ಅವರು ಮುನ್ಸೂಚನೆ ನೀಡಿದ್ದಾರೆ. ಚಳಿಗಾಲದಲ್ಲಿ ಅನಿಲ ಸಿಲಿಂಡರ್ ಹೆಚ್ಚಿನ ರೀತಿಯಲ್ಲಿ ಬಳಕೆಯಾಗುತ್ತಿದ್ದು, ಮುಂದಿನ ತಿಂಗಳ ಇದರ ಬೆಲೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ. ಇದೇ ವರ್ಷದಲ್ಲಿ ಎಲ್ಪಿಜಿ ದರದಲ್ಲಿ ಎರಡು ಸಲ ಏರಿಕೆ ಕಂಡು ಬಂದಿದ್ದು, ಸದ್ಯ 14.2 ಕೆಜಿ ಸಿಲಿಂಡರ್ ಬೆಲೆ 858.50 ರೂ. ಆಗಿದೆ.