ದೇವಾಸ್(ಮಧ್ಯಪ್ರದೇಶ): 2 ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ 16 ಮಂದಿಯನ್ನು ರಕ್ಷಿಸಿರುವ ಘಟನೆ ಇಲ್ಲಿನ ದೇವಾಸ್ ನಗರದಲ್ಲಿ ನಡೆದಿದೆ.
ಮಧ್ಯಪ್ರದೇಶ: ಎರಡಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವು.. ಹಲವರಿಗೆ ಗಾಯ - ಅವಶೇಷಗಳಡಿ ಹಲವರು ಸಿಲುಕಿ
2 ಅಂತಸ್ತಿನ ಕಟ್ಟಡ ಕುಸಿದ ಪರಿಣಾದ ಇಬ್ಬರು ಸಾವನ್ನಪ್ಪಿದ್ದರೆ, ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 16 ಮಂದಿಯನ್ನು ರಕ್ಷಿಸಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ ಎನ್ನಲಾಗ್ತಿದೆ.
ಇಲ್ಲಿನ ಸ್ಟೇಷನ್ ರಸ್ತೆಯಲ್ಲಿರುವ ಲಾಲ್ಗೇಟ್ ಬಳಿಯ ಎರಡಂತಸ್ತಿನ ಕಟ್ಟಡ ಕುಸಿತದಿಂದ ಜನರಲ್ಲಿ ಆತಂಕ ಹೆಚ್ಚಾಗಿತ್ತು. ಅಲ್ಲದೆ ಅವಶೇಷಗಳಡಿ ಹಲವರು ಸಿಲುಕಿದ್ದರು. ಬಳಿಕ ರಕ್ಷಣಾ ಕಾರ್ಯದಲ್ಲಿ 16 ಮಂದಿಯನ್ನು ರಕ್ಷಿಸಲಾಗಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ದೇವಾಸ್ನ ಎಎಸ್ಪಿ ಜಗದೀಶ್ ದಾವರ್ ಮಾಹಿತಿ ನೀಡಿದ್ದಾರೆ.
ಅಲ್ಲದೆ ರಕ್ಷಿಸಲಾದ ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಲ್ಲದೆ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯೂ ಸಹ ಕಟ್ಟಡ ಕುಸಿತಕ್ಕೆ ಕಾರಣವಾಗಿದೆ ಎಂದು ಎನ್ಡಿಆರ್ಎಫ್ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ ಈ ಕುರಿತು ಕಟ್ಟಡ ಸಿಬ್ಬಂದಿ ಜತೆ ಮಾತನಾಡಿದ್ದೇನೆ. ಕಟ್ಟಡ 5-6 ವರ್ಷದ ಹಿಂದೆ ಕಟ್ಟಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ ಎಂದರು.