ರಾಜ್‌ಘಡ್ (ಮಧ್ಯಪ್ರದೇಶ): ಮಧ್ಯಪ್ರದೇಶದ ರಾಜ್‌ಘಡ್ ಜಿಲ್ಲೆಯ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮತ್ತು ಧಾರ್ಮಿಕ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಘಟನೆಯಲ್ಲಿ ಐದು ಜನರು ಗಾಯಗೊಂಡಿದ್ದಾರೆ. ಸರಂಗಪುರ ಪಟ್ಟಣದ ಸಮೀಪವಿರುವ ಗೋಪಾಲಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ.
ಮಧ್ಯಪ್ರದೇಶದಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಮೃತರಲ್ಲಿ ಮಹಾರಾಷ್ಟ್ರದಿಂದ ಉತ್ತರ ಪ್ರದೇಶದ ಲಖ್ನೋಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಔರಂಗಾಬಾದ್ ಮೂಲದ ಧಾರ್ಮಿಕ ಮುಖಂಡ ಜುನಾ ಅಖಾದಾ ಮಹಂತ್ ಅನಂತ್ ಗಿರಿ ಮಹಾರಾಜ್ (50) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಸುನೀಗಿದ ಇತರ ನಾಲ್ವರನ್ನು ಒಂದೇ ಕುಟುಂಬಕ್ಕೆ ಸೇರಿದ ರಾಮ್ ದುಲಾರಿ (50), ಅಭಿಷೇಕ್ (19), ಕೈಲಾಶ್ (14) ಮತ್ತು ಮೋಹಿತ್ (14) ಎಂದು ಗುರುತಿಸಲಾಗಿದೆ. ಗುನಾದಿಂದ ಇಂದೋರ್‌ಗೆ ಕಾರಿನಲ್ಲಿ ಹೋಗುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಧಾರ್ಮಿಕ ಮುಖಂಡರೊಂದಿಗೆ ಪ್ರಯಾಣಿಸುತ್ತಿದ್ದ ಐದು ಜನರಿಗೆ ಗಾಯಗಳಾಗಿದ್ದು, ಅವರನ್ನು ಶಾಜಾಪುರ ಮತ್ತು ಸಾರಂಗ್‌ಪುರ ಪಟ್ಟಣಗಳ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.