ಭೋಪಾಲ್: ಇಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂಪುಟ ವಿಸ್ತರಣೆ ಮಾಡಲಿದ್ದು, 11 ಗಂಟೆಗೆ ನೂತನ ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ.
ಇಂದು ಶಿವರಾಜ್ ಸಿಂಗ್ ಚೌಹಾಣ್ ಸಚಿವ ಸಂಪುಟ ವಿಸ್ತರಣೆ
ಸುಮಾರು 2 ಡಜನ್ಗೂ ಹೆಚ್ಚು ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ. ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಮಾಜಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ಸುಮಾರು 2 ಡಜನ್ಗೂ ಹೆಚ್ಚು ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕರಿಸುವ ಸಾಧ್ಯತೆ ಇದೆ. ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಮಾಜಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಇತ್ತೀಚೆಗಷ್ಟೇ ದೆಹಲಿಗೆ ತೆರಳಿದ್ದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ, ಗೃಹ ಸಚಿವರು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ನಡೆಸಿದ್ದರು. ಇಂದು 11 ಗಂಟೆಗೆ ರಾಜಭವನದಲ್ಲಿ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಲಾಲಜಿ ಟಂಡನ್ ಅನುಪಸ್ಥಿತಿಯಲ್ಲಿ ಹಂಗಾಮಿ ರಾಜ್ಯಪಾಲರಾಗಿರುವ ಆನಂದಿಬೇನ್ ಪಟೇಲ್ ಹೊಸ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.