ಭೋಪಾಲ್: ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಸಾರಿಗೆ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ತಿಳಿಸಿದ್ದಾರೆ.
ಜೆಇಇ, ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ! - ಭೋಪಾಲ್
ಜೆಇಇ ಮತ್ತು ನೀಟ್‌ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯವನ್ನು ಒದಗಿಸುವುದಾಗಿ ಮಧ್ಯಪ್ರದೇಶ ಸರ್ಕಾರ ತಿಳಿಸಿದೆ.
ಈ ಉಚಿತ ಪ್ರಯಾಣ ಸೌಲಭ್ಯವನ್ನು ಬಯಸುವ ವಿದ್ಯಾರ್ಥಿಗಳು ಸಹಾಯವಾಣಿ 181 ಅಥವಾ ರಾಜ್ಯ ಸರ್ಕಾರದ ಇ-ಪಾಸ್ ಪೋರ್ಟಲ್ (http://mapit.gov.in/covid-19)ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಕೊರೊನಾ ವೈರಸ್‌ನಿಂದಾಗಿ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲು ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉಚಿತ ದ್ವಿಮುಖ ಸಾರಿಗೆ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಜೆಇಇ ಸೆ. 1ರಿಂದ 6ರವರೆಗೆ ನಡೆಯಲಿದ್ದು, ಸೆಪ್ಟೆಂಬರ್ 13ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ನಡೆಯಲಿದೆ.