ನವದೆಹಲಿ:ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಇದೀಗ ಫೈನಲ್ ಹಂತಕ್ಕೆ ತಲುಪುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರ ಉರುಳಿಸುವುದು ಬಿಟ್ಟು, ಪೆಟ್ರೋಲ್ ಬೆಲೆ ಕಡಿಮೆ ಮಾಡಿಸಿ; ನಮೋ ವಿರುದ್ಧ ರಾಗಾ ವಾಗ್ದಾಳಿ - ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು
ಮಧ್ಯಪ್ರದೇಶದಲ್ಲಿನ ರಾಜಕೀಯ ಬಿಕ್ಕಟ್ಟು ಉಂಟಾಗಲು ಕೇಂದ್ರ ಸರ್ಕಾರ ನೇರ ಹೊಣೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಕೂಡ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಚುನಾಯಿತ ಕಾಂಗ್ರೆಸ್ ಸರ್ಕಾರ ಉರುಳಿಸುವುದರಲ್ಲಿ ನೀವೂ ತುಂಬಾ ಬ್ಯುಸಿ ಆಗಿದ್ದೀರಿ. ಆದರೆ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಶೇ.35ರಷ್ಟು ಕುಸಿದಿರುವುದು ನಿಮ್ಮ ಗಮನಕ್ಕೆ ಇಲ್ಲದೇ ಇರಬಹುದು. ಇದರ ಲಾಭ ದೇಶದ ಜನರಿಗೆ ಸಿಗುವಂತೆ ಮಾಡಿ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 60 ರೂಗಿಂತಲೂ ಕಡಿಮೆ ಮಾಡಿಸಿ ದೇಶದ ಆರ್ಥಿಕತೆ ಬಲಪಡಿಸಿ ಎಂದು ಟ್ವೀಟ್ ಮಾಡಿದ್ದಾರೆ.
ಮಧ್ಯಪ್ರದೇಶದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ರಾಜೀನಾಮೆ ನೀಡುತ್ತಿದ್ದಂತೆ ಅವರ ಬೆನ್ನಲ್ಲೇ ಬರೋಬ್ಬರಿ 22 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ. ಇಷ್ಟೊಂದು ಬೆಳವಣಿಗೆ ಆಗಲು ಕೇಂದ್ರ ಸರ್ಕಾರ ನೇರ ಹೊಣೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು.