ಚೆನ್ನೈ(ತಮಿಳುನಾಡು) :ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಿರುವ ಮದ್ರಾಸ್ ಹೈಕೋರ್ಟ್ ಮೇ 17ರವರೆಗೆ ಆನ್ಲೈನ್ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ.
ತಮಿಳುನಾಡಿನ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಮದ್ರಾಸ್ ಹೈಕೋರ್ಟ್ ಆದೇಶ.. ಆದ್ರೂ ಚಿಂತೆ ಇಲ್ಲ..
ಮದ್ಯದಂಗಡಿಗಳ ಮುಂದೆ ಸಾಮಾಜಿಕ ಅಂತರ ಪಾಲಿಸುತ್ತಿಲ್ಲ ಎಂದು ಗಮನಿಸಿದ ನ್ಯಾಯಮೂರ್ತಿಗಳಾದ ವಿನೀತ್ ಕೊಠಾರಿ ಮತ್ತು ಪುಷ್ಪಾ ಸತ್ಯನಾರಾಯಣ ಅವರಿದ್ದ ನ್ಯಾಯಪೀಠವು ವಕೀಲ ಜಿ.ರಾಜೇಶ್ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶ ನೀಡಿದೆ.
liquor shop
ಮದ್ಯದಂಗಡಿಗಳ ಮುಂದೆ ಸಾಮಾಜಿಕ ಅಂತರ ಪಾಲಿಸುತ್ತಿಲ್ಲ ಎಂದು ಗಮನಿಸಿದ ನ್ಯಾಯಮೂರ್ತಿಗಳಾದ ವಿನೀತ್ ಕೊಠಾರಿ ಮತ್ತು ಪುಷ್ಪಾ ಸತ್ಯನಾರಾಯಣ ಅವರಿದ್ದ ನ್ಯಾಯಪೀಠವು ವಕೀಲ ಜಿ.ರಾಜೇಶ್ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ಈ ಆದೇಶ ನೀಡಿದೆ.
45 ದಿನಗಳ ಅಂತರದ ಬಳಿಕ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲಾಗಿತ್ತು. ಹಾಗಾಗಿ ಸುಮಾರು 170 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿತ್ತು. ಆದರೆ, ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಹಾಕಿದ ಷರತ್ತುಗಳನ್ನು ಮದ್ಯದಂಗಡಿಗಳು ಪಾಲಿಸುತ್ತಿರಲಿಲ್ಲ. ಹೀಗಾಗಿ ಇದರ ವಿರುದ್ಧ ಹಲವಾರು ಅರ್ಜಿಗಳು ನ್ಯಾಯಾಲಯದಲ್ಲಿ ದಾಖಲಾಗಿದ್ದವು.