ಮಧುರೈ: ತಡರಾತ್ರಿ ನಡು ರೋಡಿನಲ್ಲೇ ರಿಯಲ್ ಎಸ್ಟೇಟ್ ಉದ್ಯಮಿಯೋರ್ವನನ್ನ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದ್ದು, ಅದರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಡು ರೋಡಿನಲ್ಲೇ ರಿಯಲ್ ಎಸ್ಟೇಟ್ ಉದ್ಯಮಿಯ ಕ್ರೂರ ಹತ್ಯೆ... ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ! - ರಿಯಲ್ ಎಸ್ಟೇಟ್ ಉದ್ಯಮಿ
ರಿಯಲ್ ಎಸ್ಟೇಟ್ ಉದ್ಯಮಿಯನ್ನ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಅದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿಯ ಕ್ರೂರ ಹತ್ಯೆ
ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದು, ಉದ್ಯಮಿ ರಾಜ್ ಮಧುರೈ ನಗರದ ಪುತ್ತೂರ್ನ ಬಾರತಿಯಾರ್ ರಸ್ತೆಯಿಂದ ಮನೆಗೆ ತೆರಳುತ್ತಿದ್ದಾಗ ಕೆಲ ದುಷ್ಕರ್ಮಿಗಳು ಅಡ್ಡಗಟ್ಟಿ ಈ ಕೃತ್ಯ ನಡೆಸಿದ್ದು, ವ್ಯಕ್ತಿಯನ್ನ ಚಾಕುವಿನಿಂದ ಕ್ರೂರವಾಗಿ ಹತ್ಯೆ ಮಾಡಿದ್ದಾರೆ.
ಸಿಸಿ ಕ್ಯಾಮೆರಾದಲ್ಲಿ ನಾಲ್ಕರಿಂದ ಐವರು ಇರುವುದು ಕಂಡು ಬಂದಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ನಂತರ ಅವರು ಪರಾರಿಯಾಗಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.