ಮುಂಬೈ(ಮಹಾರಾಷ್ಟ್ರ): ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದ ಎನ್ಸಿಪಿ ನಾಯಕ ಅಜಿತ್ ಪವಾರ್ ಉಪ ಮುಖ್ಯಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಅಧಿಕಾರಕ್ಕೆ ಬಂದ 32 ದಿನಗಳ ನಂತರ ಠಾಕ್ರೆ ಸಂಪುಟ ವಿಸ್ತರಣೆಗೊಂಡಿದ್ದು 25 ಸಂಪುಟ ದರ್ಜೆ ಮತ್ತು 10 ಮಂದಿ ರಾಜ್ಯ ಖಾತೆ ಸಚಿರು ಸೇರಿದಂತೆ 36 ಮಂದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇನ್ನು ಉದ್ಧವ್ ಠಾಕ್ರೆ ನಂತರ, ವಿಧಾನಸಭೆಗೆ ಮೊದಲಬಾರಿಗೆ ಆಯ್ಕೆಯಾಗಿರುವ ಠಾಕ್ರೆ ಕುಟುಂಬದ ಕುಡಿ ಆದಿತ್ಯ ಠಾಕ್ರೆ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.
ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ಅಶೋಕ್ ಚವ್ಹಾಣ್, ಎನ್ಸಿಪಿ ನಾಯಕ ನವಾಬ್ ಮಲ್ಲಿಕ್, ಕಾಂಗ್ರೆಸ್ ಪಕ್ಷದ ಅಮಿತ್ ದೇಶಮುಖ್ ಸೇರಿದಂತೆ 36 ಮಂದಿ ಸಚಿವರಾಗಿ ಪದಗ್ರಹನ ಸ್ವೀಕರಿಸಿದ್ರು. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ನೂತನ ಸಚಿವರಿಗೆ ಪದಗ್ರಹಣ ಬೋಧಿಸಿದರು.
ಅಜಿತ್ ಪವಾರ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಎರಡು ತಿಂಗಳಲ್ಲಿ ಇದು ಎರಡನೇ ಬಾರಿ. ನವೆಂಬರ್ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರದಲ್ಲಿ ಉಪ ಮುಖ್ಯಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 10 ಮಂದಿ ಕಾಂಗ್ರೆಸಿಗರು ಕೂಡ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.