ಮುಂಬೈ:ಕೆಲವು ದಿನಗಳಿಂದ ರಾಜಕೀಯ ಟೀಕೆಗಳನ್ನು ಎದುರಿಸಿದ್ದು, ಕೊರೊನಾ ವೈರಸ್ ವಿರುದ್ಧವೂ ಹೋರಾಡುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡಿದ ಅವರು ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಮುಂಬೈ ಕಚೇರಿ ವಿಚಾರ ಹಾಗೂ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರವಾಗಿ ತಮ್ಮ ವಿರುದ್ಧ ಬಂದ ಟೀಕೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.
ಇದರ ಜೊತೆಗೆ ರಾಜಕೀಯ ಬಿಕ್ಕಟ್ಟಿನ ಬಗ್ಗೆಯೂ ಉಲ್ಲೇಖಿಸಿದ ಅವರು ರಾಜಕೀಯದ ಬಗ್ಗೆ ಮಾತನಾಡಬೇಕೆಂದರೆ ಮುಖ್ಯಮಂತ್ರಿಯ ಮುಖವಾಡವನ್ನು ತೆಗೆಯಬೇಕು. ನಾನು ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲವೆಂದರೆ ನನ್ನ ಬಳಿ ಉತ್ತರಗಳಿಲ್ಲ ಎಂಬುದಲ್ಲ' ಎಂದು ಪ್ರತಿಪಕ್ಷಗಳಿಗೆ ಮಾರ್ಮಿಕವಾಗಿ ಟಾಂಗ್ ನೀಡಿದರು.
ಸ್ವಾಭಾವಿಕವಾಗಿ ಅಥವಾ ರಾಜಕೀಯವಾಗಿ ಯಾವುದೇ ಬಿರುಗಾಳಿ ಬಂದರೂ ಎದುರಿಸಲು ಸಿದ್ಧವಿದ್ದೇವೆ ಎಂದ ಅವರು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೇತೃತ್ವದ ಬಿಜೆಪಿಯು ಶಿವಸೇನೆ ವಿರುದ್ಧ ಮಾಡುತ್ತಿರುವ ಆರೋಪಗಳ ವಿರುದ್ಧ ಕಿಡಿಕಾರಿದರು.