ಥಾಣೆ (ಮಹಾರಾಷ್ಟ್ರ):ಭಯಂದರ್ ಟೌನ್ ಮಹಿಳಾ ಕಾರ್ಪೋರೇಟರ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ಮಾಜಿ ಶಾಸಕ ನರೇಂದ್ರ ಮೆಹ್ತಾ ಸೇರಿದಂತೆ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆ ಬಿಜೆಪಿಗೆ ರಾಜೀನಾಮೆ ನೀಡಿದ ಸಂಜಯ್ ಟಾರ್ಕರ್ ಮತ್ತು ನರೇಂದ್ರ ಮೆಹ್ತಾ ವಿರುದ್ಧ ಜಿಲ್ಲಾ ಗ್ರಾಮೀಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮೀರಾ-ಭಯಂದರ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಪರಾರಿಯಾಗಿದ್ದು ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.