ಮುಂಬೈ: ಕೊರೊನಾ ವೈರಸ್ನಿಂದಾಗಿ ದೇಶದಾದ್ಯಂತ ಜನತಾ ಕರ್ಫ್ಯೂ ಜಾರಿಯಾಗಿದೆ. ಹಲವೆಡೆ ಜನ ಜೀವನದ ಮೇಲೆ ಕೊರೊನಾ ವ್ಯತಿರಿಕ್ತ ಪರಿಣಾಮ ಬೀರಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ 10ನೇ ತರಗತಿ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ಕೊರೊನಾ ಎಫೆಕ್ಟ್: 10ನೇ ತರಗತಿ ಪರೀಕ್ಷೆ ಮುಂದೂಡಿದ ಸರ್ಕಾರ - 10ನೇ ತರಗತಿ ಕೊನೆಯ ಪರೀಕ್ಷೆ ಮುಂದೂಡಿಕೆ
ಮಹಾರಾಷ್ಟ್ರದಲ್ಲಿ 10ನೇ ತರಗತಿ ಕೊನೆಯ ಪತ್ರಿಕೆ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾದ ಹಿನ್ನೆಲೆ 10ನೇ ತರಗತಿಯ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಮಾಹಿತಿ ನೀಡಿದ್ದಾರೆ.
ಕೊರೊನಾ ಎಫೆಕ್ಟ್: 10ನೇ ತರಗತಿ ಪರೀಕ್ಷೆ ಮುಂದೂಡಿದ ಮಹಾರಾಷ್ಟ್ರ
ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾದ ಹಿನ್ನೆಲೆ 10ನೇ ತರಗತಿಯ ಕೊನೆ ಪರೀಕ್ಷೆಯನ್ನು ಮುಂದೂಡಲಾಗಿದೆ ಅಂತ ಮಹಾರಾಷ್ಟ್ರ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಮಾಹಿತಿ ನೀಡಿದ್ದಾರೆ.
ಹೊಸ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ಘೋಷಿಸಲಾಗುವುದು ಎಂದಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.