ಜಲ್ನಾ (ಮಹಾರಾಷ್ಟ್ರ) :ಕೋವಿಡ್ ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ್ದಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.93 ರೂ. ಲಕ್ಷ ಪಾವತಿಸುವಂತೆ ಖಾಸಗಿ ಆಸ್ಪತ್ರೆಯೊಂದಕ್ಕೆ ಜಿಲ್ಲಾಡಳಿತ ಆದೇಶಿಸಿದೆ.
ಕೆಲವು ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ಹೆಚ್ಚಿನ ಹಣವನ್ನು ಪಡೆಯುತ್ತಿದೆ ಎಂಬ ದೂರಿನ ಹಿನ್ನೆಲೆ ಪರಿಶೀಲನೆ ನಡೆಸಿದ ಜಲ್ನಾ ಜಿಲ್ಲಾಧಿಕಾರಿ ರವೀಂದ್ರ ಬಿನ್ವಾಡೆ ಈ ಆದೇಶ ಹೊರಡಿಸಿದ್ದಾರೆ. ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಗೆ ವಿಧಿಸುತ್ತಿರುವ ಶುಲ್ಕದ ಬಗ್ಗೆ ಪರಿಶೀಲನೆ ನಡೆಸಲು ಆಡಿಟರ್ಗಳನ್ನು ನೇಮಕ ಮಾಡಲಾಗಿತ್ತು. ಪರಿಶೀಲನೆ ವೇಳೆ ಜಲ್ನಾದ ವಿವೇಕಾನಂದ ಆಸ್ಪತ್ರೆ 1,93,986 ರೂ. ಶುಲ್ಕ ವಿಧಿಸಿರುವುದು ಗೊತ್ತಾಗಿದೆ. ಹೀಗಾಗಿ, ದಂಡ ವಿಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.