ನವದೆಹಲಿ: ತೀವ್ರವಾದ ಕುತೂಹಲ ಮೂಡಿಸಿರುವ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಮತ್ತು ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶಗಳ ನಾನಾ ವಿಧಾನಸಭೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ನೆರೆಯ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ಆರಂಭಿಕವಾಗಿ 51 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿರುವುದಾಗಿ ಎಐಸಿಸಿ ಸಮಿತಿ ಹೇಳಿದೆ. ಮಹಾರಾಷ್ಟ್ರದ ಮಾಜಿ ಸಿಂಎ ಅಶೋಕ್ ಚವ್ಹಾಣ್ ಅವರು ಭಿಕರ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಮಹಾರಾಷ್ಟ್ರದಲ್ಲಿ ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದೆ. ಮಹಾರಾಷ್ಟ್ರದ ಒಟ್ಟು 288 ಸ್ಥಾನಗಳಿಗೆ ಕಾಂಗ್ರೆಸ್- ಎನ್ಸಿಪಿ ಮೈತ್ರಿಕೂಟ ತಲಾ 125 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.