ಮುಂಬೈ: ಕರ್ತವ್ಯದಲ್ಲಿದ್ದಾಗ ಕೋವಿಡ್ -19 ಕಾರಣ ಸಾವನ್ನಪ್ಪಿದರೆ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಗೆ ಸರ್ಕಾರ 50 ಲಕ್ಷ ರೂ.ಗಳ ಪರಿಹಾರ ಧನ ನೀಡಲಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.
ಹಣಕಾಸು ಖಾತೆ ಸಚಿವರೂ ಆಗಿರುವ ಪವಾರ್, ಗೃಹ ಸಚಿವ ಅನಿಲ್ ದೇಶ್ಮುಖ್, ಆರೋಗ್ಯ ಸಚಿವ ರಾಜೇಶ್ ಟೊಪೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ.