ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಬಾಂಗ್ಲಾದೇಶಿ ಪ್ರಜೆಗಳ ಬಂಧನ - ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸಾರ್‌ ಎಂಬಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

Bangladeshi nationals arrest in Boisar, ಬಾಂಗ್ಲಾದೇಶಿ ಪ್ರಜೆಗಳ ಬಂಧನ
ಬಾಂಗ್ಲಾದೇಶಿ ಪ್ರಜೆಗಳ ಬಂಧನ

By

Published : Dec 17, 2019, 6:45 AM IST

ಪಾಲ್ಘರ್ (ಮಹಾರಾಷ್ಟ್ರ) :ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸಾರ್‌ ಎಂಬಲ್ಲಿ ಅಕ್ರಮವಾಗಿ ನೆಲೆಸಿದ್ದ 12 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

9 ಪುರುಷರು ಮತ್ತು 3 ಮಹಿಳೆಯರು ಸೇರಿದಂತೆ ಒಟ್ಟು 12 ಮಂದಿ ಬಾಂಗ್ಲಾದೇಶದ ಪ್ರಜೆಗಳು ಪಾಲ್ಘರ್ ಜಿಲ್ಲೆಯ ಬೋಯಿಸಾರ್‌ ಪ್ರದೇಶದಲ್ಲಿ ಅಕ್ರಮವಾಗಿ ವಾಸವಾಗಿದ್ದರು. ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಂಧಿತರ ಬಳಿ ಯಾವುದೇ ಅಗತ್ಯ ದಾಖಲೆಗಳಿಲ್ಲ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details