ಮಹಾರಾಷ್ಟ್ರ:ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ನೆರೆಹಾವಳಿ ಉದ್ಭವವಾಗಿದ್ದು, ಸಾವಿರಾರು ಜನರು ನಿರಾಶ್ರಿತರಾಗಿ ಮನೆ ಕಳೆದುಕೊಂಡಿದ್ದಾರೆ.
ಇದೀಗ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಿವೀಸ್ ಕರ್ನಾಟಕದ ಗಡಿ ಪ್ರದೇಶಗಳಾಗಿರುವ ಕೊಲ್ಲಾಪುರ, ಸಾಂಗ್ಲಿ ಹಾಗೂ ಸತಾರಾ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ, ಅಲ್ಲಿನ ಜನರೊಂದಿಗೆ ಮಾತನಾಡಿದರು. ಇನ್ನು ಕೊಲ್ಲಾಪುರದ ಶಿವಾಜಿನಗರ ಪ್ರದೇಶದಲ್ಲಿನ ನೆರೆ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.
ಇದೇ ವೇಳೆ ಮಾಹಿತಿ ನೀಡಿರುವ ಫಡ್ನವೀಸ್, ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಮಾನತಾಡಿದ್ದು, ತಕ್ಷಣವೇ ಆಲಮಟ್ಟಿ ಜಲಾಶಯದಿಂದ 5 ಲಕ್ಷ ಕ್ಯೂಸಕ್ ನೀರು ರಿಲೀಸ್ ಮಾಡುವಂತೆ ತಿಳಿಸಿದ್ದು, ಇದರಿಂದ ಸಾಂಗ್ಲಿ ಪ್ರದೇಶದಲ್ಲಿನ ನೆರೆಹಾವಳಿ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಬಿಎಸ್ ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇನ್ನು ನೆರೆಯ ಕೊಯ್ನಾ, ವರಣಾ ಜಲಾಶಯಗಳು ಬಹುತೇಕ ತುಂಬಿದ್ದು, ಇದರಿಂದ ಕೃಷ್ಣಾ ನದಿನ ನೀರಿನ ಹರಿವು ಹೆಚ್ಚಾಗಿದೆ. ಹೀಗಾಗಿ ಕೂಡಲೇ ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಕಡಿಮೆ ಮಾಡಲು ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ.
ಇನ್ನು ಮಹಾರಾಷ್ಟ್ರದಿಂದ ಸತತವಾಗಿ ಹರಿದು ಬರುತ್ತಿರುವ ನೀರಿನಿಂದಾಗಿ ಬೆಳಗಾವಿ,ಬೆಳಗಾವಿ, ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ ಹಾಗೂ ಭೀಮಾ ನದಿಗಳಲ್ಲಿ ನೆರೆಹಾವಳಿ ಉಂಟಾಗಿದೆ.