ಕರ್ನಾಟಕ

karnataka

ETV Bharat / bharat

ಈ ವರ್ಷದ ಹುಟ್ಟುಹಬ್ಬ ಆಚರಿಸದಿರಲು ಮಹಾರಾಷ್ಟ್ರ ಸಿಎಂ ನಿರ್ಧಾರ - ಮಹಾರಾಷ್ಟ್ರ ಮುಖ್ಯಮಂತ್ರಿ

ರಾಜ್ಯದಲ್ಲಿ ಕೊರೊನಾ ಅಬ್ಬರ ಜೋರಾಗಿರುವ ಕಾರಣ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾರೆ.

Maharashtra CM
Maharashtra CM

By

Published : Jul 23, 2020, 7:13 PM IST

ಮುಂಬೈ:ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹಾವಳಿ ಜೋರಾಗಿದೆ. ಪ್ರತಿದಿನ ಸಾವಿರಾರು ಹೊಸ ಹೊಸ ಕೋವಿಡ್​ ಕೇಸ್‌ಗಳು ಪತ್ತೆಯಾ​ಗುತ್ತಿವೆ. ಈಗಾಗಲೇ 3 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಕಾಣಿಸಿಕೊಂಡಿವೆ. ಹೀಗಾಗಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಈ ವರ್ಷದ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈ ವರ್ಷ ತಾವು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಇದರ ಜೊತೆಗೆ ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಫ್ಲೆಕ್ಸ್​ ಹಾಗೂ ಬ್ಯಾನರ್​ ಹಾಕದಂತೆಯೂ ಮನವಿ ಮಾಡಿದ್ದಾರೆ.

ಇದೇ ವೇಳೆ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ತಿಳಿಸಿರುವ ಅವರು, ರಕ್ತ ಹಾಗೂ ಪ್ಲಾಸ್ಮ ದಾನ ಮಾಡಲು ಕ್ಯಾಂಪ್​​​ ಆಯೋಜನೆ ಮಾಡುವಂತೆ ಮನವಿ ಮಾಡಿದ್ದಾರೆ. ಜುಲೈ 27ರಂದು ಉದ್ಧವ್​ ಠಾಕ್ರೆ 60ನೇ ವರ್ಷಕ್ಕೆ ಕಾಲಿಡಲಿದ್ದಾರೆ.

ABOUT THE AUTHOR

...view details