ಮುಂಬೈ (ಮಹಾರಾಷ್ಟ್ರ): ಶಿವಸೇನೆಯ ಮುಖವಾಣಿ 'ಸಾಮ್ನಾ'ಗೆ ನೀಡಿದ ಸಂದರ್ಶನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿಪಕ್ಷಗಳು 'ಪ್ರತೀಕಾರದ ರಾಜಕೀಯ' ನಡೆಸುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ.
'ಪ್ರತೀಕಾರದ ರಾಜಕೀಯ'.. ವಿಪಕ್ಷಗಳ ವಿರುದ್ಧ ಹರಿಹಾಯ್ದ ಉದ್ಧವ್ ಠಾಕ್ರೆ - ಕೇಂದ್ರೀಯ ತನಿಖಾ ಸಂಸ್ಥೆ
ಯಾರಾದರೂ ನಮ್ಮ ಕುಟುಂಬಗಳನ್ನು ಗುರಿಯಾಗಿಸಿಕೊಂಡಿದ್ದರೆ ಅಂತವರು ತಮಗೂ ಕುಟುಂಬಗಳು ಮತ್ತು ಮಕ್ಕಳೂ ಇದ್ದಾರೆ ಎಂಬುದನ್ನು ಮರೆಯಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
ಉದ್ಧವ್ ಠಾಕ್ರೆ
ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಠಾಕ್ರೆ ಈ ಮಾತು ಹೇಳಿದ್ದಾರೆ. ದೇಶದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಸಿಎಂ ಗಂಭೀರವಾಗಿ ಆರೋಪಿಸಿದ್ದಾರೆ.
ರಾಜ್ಯದ ಎಲ್ಲ ರಾಜಕೀಯ ಬೆಳವಣಿಗೆಗಳ ಬಗ್ಗೆ ನಮ್ಮ ಪಕ್ಷವು ನಿಕಟ ಗಮನ ಹರಿಸುತ್ತಿದೆ. ಯಾರಾದರೂ ನಮ್ಮ ಕುಟುಂಬಗಳನ್ನು ಗುರಿಯಾಗಿಸಿಕೊಂಡಿದ್ದರೆ ಅಂತಹವರು ತಮಗೂ ಕುಟುಂಬಗಳು ಮತ್ತು ಮಕ್ಕಳೂ ಇದ್ದಾರೆ ಎಂಬುದನ್ನು ಮರೆಯಬಾರದು ಎಂದು ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.