ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನಕಳೆದಂತೆ ಹೆಚ್ಚಳವಾಗುತ್ತಿದೆ. ಇಲ್ಲಿಯವರೆಗೆ ವೈರಾಣು ಹರಡುವಿಕೆ ನಿಯಂತ್ರಣಕ್ಕೆ ಬಂದಿಲ್ಲ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಲೆ ನೋವು ಹೆಚ್ಚಿಸಿದೆ. ಈ ನಡುವೆ ರಾಜ್ಯದಲ್ಲಿ ಸೇನೆ ನಿಯೋಜನೆ ಮಾಡಲಾಗುವುದು ಎಂಬ ವದಂತಿ ಹಬ್ಬಿದ್ದು, ಸಿಎಂ ಉದ್ಧವ್ ಠಾಕ್ರೆ ಸ್ಪಷ್ಟನೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಸೇನೆ ನಿಯೋಜನೆ ಮಾಡುವ ಅವಶ್ಯಕತೆ ಇಲ್ಲ. ಇಂತಹ ಊಹಾಪೋಹದ ಸುದ್ದಿಗಳನ್ನು ನಂಬಬೇಡಿ. ಜನರಿಗೆ ಸೂಕ್ತ ರೀತಿಯಲ್ಲಿ ಮಾಹಿತಿ ನೀಡಿ ನಾವು ಈವರೆಗೆ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಸಾರ್ವಜನಿಕರು ಸರ್ಕಾರದ ಸೂಚನೆಗಳನ್ನು ಪಾಲಿಸಿದರೆ ಸಾಕು. ಯಾವುದೇ ಕಾರಣಕ್ಕೂ ಸೇನೆ ನಿಯೋಜನೆ ಮಾಡುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಮರ್ಥರಾಗಿದ್ದಾರೆ. ಅವರು ಹಗಲು,ರಾತ್ರಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದರು.
'ತವರಿಗೆ ತೆರಳುವ ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ '