ಹೈದರಾಬಾದ್: ದೇಶಾದ್ಯಂತ ಕೊರೊನಾ ಆರ್ಭಟ ಜೋರಾಗಿದ್ದು, ಲಾಕ್ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಅತಿ ಹೆಚ್ಚು ಸೋಂಕಿತ ಪ್ರಕರಣಗಳು ಪ್ರತಿದಿನ ಪತ್ತೆಯಾಗುತ್ತಿವೆ. ಇದೀಗ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 23 ಸಾವಿರಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿವೆ.
ಸದ್ಯ ಮಹಾರಾಷ್ಟ್ರದಲ್ಲಿ 9,90,795 ಕೋವಿಡ್ ಪ್ರಕರಣಗಳಿದ್ದು, ಇಂದೇ 14,253 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು 448 ಜನರು ಮಹಾಮಾರಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 28,282 ಆಗಿದೆ. ಇಲ್ಲಿಯವರೆಗೆ 7,00,715 ಜನರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಸದ್ಯ 2,61,432 ಸಕ್ರಿಯ ಪ್ರಕರಣಗಳಿವೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.