ಮುಂಬೈ:ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ಗೆ ಕೋವಿಡ್ ಪಾಸಿಟಿವ್ - Maharashtra Deputy Chief Minister Ajit Pawar
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಕೋವಿಡ್ ವರದಿ ಪಾಟಿಟಿವ್ ಬಂದಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್
ಅಜಿತ್ ಪವಾರ್ ಅವರ ಕೋವಿಡ್ ವರದಿ ಪಾಟಿಟಿವ್ ಬಂದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆ ಮೇರೆಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಡಿಸಿಎಂ ಕಚೇರಿ ಮೂಲಗಳು ಮಾಹಿತಿ ನೀಡಿವೆ.
ತಾವು ಕ್ಷೇಮವಾಗಿದ್ದು, ಪಕ್ಷದ ಕಾರ್ಯಕರ್ತರು, ಜನರು ಆತಂಕಗೊಳಗಾಗುವ ಅಗತ್ಯವಿಲ್ಲ. ಕೆಲ ದಿನ ವಿಶ್ರಾಂತಿ ತೆಗೆದುಕೊಂಡು ಆದಷ್ಟು ಬೇಗ ಮರಳುವೆ ಎಂದು ಎನ್ಸಿಪಿ (ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ) ನಾಯಕ ಪವಾರ್ ತಿಳಿಸಿದ್ದಾರೆ.