ದೆಹಲಿ:ರಾಷ್ಟ್ರೀಯ ಕಾಂಗ್ರೆಸ್ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರದ ವಿರುದ್ಧ ದೆಹಲಿ ಸಂಸತ್ತಿನ ಆವರಣದ ಬಳಿ ಪ್ರತಿಭಟನೆ ನಡೆಯಿತು.
ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಿಸಿ: 'ಮಹಾ' ಸರ್ಕಾರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ - 'ಮಹಾ' ಸರ್ಕಾರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರದ ವಿರುದ್ಧ ದೆಹಲಿ ಸಂಸತ್ತಿನ ಆವರಣದ ಬಳಿ ಪ್ರಜಾಪ್ರಭುತ್ವದ ಹತ್ಯೆ ನಿಲ್ಲಿಸಿ ಎಂದು ಕಾಂಗ್ರೆಸ್ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ನ.26 ರ ವರೆಗೂ ಮಹಾರಾಷ್ಟ್ರದಲ್ಲಿ ಎನ್ಸಿಪಿ-ಕಾಂಗ್ರೆಸ್-ಶಿವಸೇನಾ ಸೇರಿ ಮೈತ್ರಿ ಸರ್ಕಾರ ರಚನೆಯಾಗುತ್ತದೆಯೆಂಬ ಚಿತ್ರಣವೇ ನ.27 ರ ಶನಿವಾರ ಬೆಳಗಾಗುವಷ್ಟರಲ್ಲಿ ಬದಲಾಗಿ ಹೋಗಿತ್ತು. ಆಶ್ಚರ್ಯಕರ ರೀತಿಯಲ್ಲಿ ಶಾಸಕರ ಸಹಿ ಇಲ್ಲದೇ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಇದೀಗ ಇದರ ವಿರುದ್ಧ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಹತ್ಯೆಯಾಗುತ್ತಿದೆ, ಇದನ್ನು ನಿಲ್ಲಿಸಿ ಎಂದು ಆಕ್ರೋಶ ಹೊರಹಾಕಿದ್ದಾರೆ.