ಮಹಾರಾಷ್ಟ್ರ:ರಾತ್ರಿ ಬೆಳಗಾಗುವಷ್ಟರಲ್ಲಿ ಮಹಾರಾಷ್ಟ್ರ ರಾಜಕೀಯದಲ್ಲಿ ಊಹಿಸಲಾಗದ ಬೆಳವಣಿಗೆ ನಡೆದಿದೆ. ರಾಜ್ಯದಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಎನ್‌ಸಿಪಿಯ ಅಜಿತ್ ಪವಾರ್, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇನ್ನು ಪ್ರಮಾಣವಚನ ಸ್ವೀಕರಿಸಿ ಪ್ರತಿಕ್ರಿಯೆ ನೀಡಿರುವ ನೂತನ ಸಿಎಂ ದೇವೇಂದ್ರ ಫಡ್ನವೀಸ್, ಚುನಾವಣೆಯಲ್ಲಿ ಜನರು ನಮಗೆ ಸ್ಪಷ್ಟ ಜನಾದೇಶ ಆದೇಶವನ್ನು ನೀಡಿದ್ದರು, ಆದರೆ ಫಲಿತಾಂಶಗಳ ನಂತರ ಶಿವಸೇನೆ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸಿತು. ಇದರ ಪರಿಣಾಮವಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು. ಮಹಾರಾಷ್ಟ್ರಕ್ಕೆ ಬೇಕಾಗಿರೋದು ಸ್ಥಿರ ಸರ್ಕಾರವೇ ಹೊರತು 'ಕಿಚಡಿ' ಸರ್ಕಾರವಲ್ಲ. ರಾಜ್ಯದಲ್ಲಿ ಸ್ಥಿರ ಸರ್ಕಾರ ರಚಿಸಲು ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಎನ್‌ಸಿಪಿಯ ಅಜಿತ್ ಪವಾರ್ಗೆ ಧನ್ಯವಾದಗಳು ಎಂದು ಹೇಳಿದ್ದಾರೆ.