ಮುಂಬೈ:ದೇಶಾದ್ಯಂತ ಕೊರೊನಾ ಅಬ್ಬರ ಜೋರಾಗಿದ್ದು, ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಮಹಾರಾಷ್ಟ್ರದಲ್ಲಿ ಇದರ ಅಬ್ಬರ ಮತ್ತಷ್ಟು ವೇಗ ಪಡೆದುಕೊಂಡಿದೆ.
ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ ದಾಖಲೆಯ 7,074 ಹೊಸ ಕೊರೊನಾ ಪ್ರಕರಣ ಕಾಣಿಸಿಕೊಂಡಿದ್ದು, 295 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ ಇದೀಗ 2,00,064 ಆಗಿದ್ದು, ಸಾವಿನ ಸಂಖ್ಯೆ 8,671ರ ಗಡಿ ದಾಟಿದೆ. ಸದ್ಯ ಮಹಾರಾಷ್ಟ್ರದಲ್ಲಿ 83,295 ಆ್ಯಕ್ಟೀವ್ ಕೇಸ್ಗಳಿವೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜತೆಗೆ ಇಂದು 3,395 ಜನರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಲ್ಲಿಯವರೆಗೆ 10,80,975 ಕೋವಿಡ್ ಟೆಸ್ಟ್ ನಡೆಸಲಾಗಿದೆ.