ನಾಸಿಕ್:ಹಸುಗಳನ್ನು ಬಚಾವ್ ಮಾಡಲು ಹೋಗಿ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ.
ದಾರಿಗೆ ಅಡ್ಡ ಬಂದ ಹಸುಗಳು... ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವು! - ನಾಸಿಕ್ ಸುದ್ದಿ
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶನಿವಾರ ಸಂಜೆ ಸಿನ್ನಾರ್ ಸಮೀಪ ನಾಸಿಕ್-ಪುಣೆ ಹೈವೇಯಲ್ಲಿ ದನಗಾಹಿಯೊಬ್ಬ ದನ-ಕರುಗಳನ್ನು ರಸ್ತೆ ದಾಟಿಸುತ್ತಿದ್ದ. ರಸ್ತೆಗೆ ಅಡ್ಡ ಬಂದ ದನ-ಕರುಗಳನ್ನು ಗಮಿನಿಸಿದ ಚಾಲಕ ವೇಗವಾಗಿರುವ ಲಾರಿಯನ್ನು ನಿಲ್ಲಿಸಲು ಯತ್ನಿಸಿದ್ದಾನೆ. ಈ ವೇಳೆ ಚಾಲಕ ಸಡನ್ ಆಗಿ ಬ್ರೇಕ್ ಹಾಕಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಆದ್ರೆ ಲಾರಿ ನಿಯಂತ್ರಣ ತಪ್ಪಿ ದನಗಾಹಿ ಮತ್ತು ದನ-ಕರುಗಳ ಮೇಲೆ ಹರಿದಿದೆ. ಪರಿಣಾಮ ದನಗಾಹಿ ಸೇರಿದಂತೆ ಹಲವು ದನ-ಕರುಗಳು ಸ್ಥಳದಲ್ಲೇ ಮೃತಪಟ್ಟಿವೆ.
ಇನ್ನು ಚಾಲಕ ಸಡನ್ ಬ್ರೇಕ್ ಹಾಕಿದ್ದರಿಂದ ಲಾರಿ ಹಿಂಬದಿಗೆ ವೇಗವಾಗಿ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಯಲ್ಲಿದ್ದ ಪ್ರಯಾಣಿಕರಲ್ಲಿ ಇಬ್ಬರು ಮತ್ತು ಟೆಂಪೋದಲ್ಲಿದ್ದ ಪ್ರಯಾಣಿಕರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಗಳುಗಳನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.