ಕರ್ನಾಟಕ

karnataka

ETV Bharat / bharat

ದೇಶಾದ್ಯಂತ ಪ್ರತಿಭಟನೆ: ಹೊಸ ಕೃಷಿ ಕಾಯ್ದೆ ಜಾರಿ ಮಾಡಿಯೇ ಬಿಡ್ತು ಮಹಾರಾಷ್ಟ್ರ - ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ

ಕೃಷಿ ಸಂಬಂಧಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದರೆ ಇತ್ತ ಮಹಾರಾಷ್ಟ್ರ ಈ ಕಾಯ್ದೆಗಳನ್ನು ಜಾರಿ ಮಾಡಿದ ಮೊದಲ ರಾಜ್ಯವಾಗಿ ಅಚ್ಚರಿ ಮೂಡಿಸಿದೆ.

maharashtra-was-first-to-implement-agri-laws-in-august
ದೇಶಾದ್ಯಂತ ಪ್ರತಿಭಟನೆ : ಹೊಸ ಕೃಷಿ ಕಾಯ್ದೆ ಜಾರಿ ಮಾಡಿಯೇ ಬಿಡ್ತು ಮಹಾರಾಷ್ಟ್ರ

By

Published : Sep 28, 2020, 6:26 PM IST

ಮುಂಬೈ: ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮಹಾ ವಿಕಾಸ್‌ ಅಘಾಡಿ ಭಾರಿ ವಿವಾದಕ್ಕೆ ಕಾರಣವಾಗಿರುವ ನೂತನ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದ ಮೊದಲ ರಾಜ್ಯವಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಕಳೆದ ವಾರವಷ್ಟೇ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿತ ಮಸೂದೆಗಳು ಅಂಗೀಕಾರಗೊಂಡಿದ್ದವು. ಇವು ರೈತರಿಗೆ ಮಾರಕವಾಗಲಿವೆ ಎಂದು ಲಕ್ಷಾಂತರ ಮಂದಿ ರೈತರು ಇಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರದ ವಿರೋಧಿಯಾಗಿರುವ ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಮೈತ್ರಿ ಸರ್ಕಾರವೇ ಈ ಕಾಯ್ದೆಗಳನ್ನು ಜಾರಿಗೆ ತಂದಿದೆ.

ಅಲ್ಲಿನ ಸರ್ಕಾರದ ಮಾರುಕಟ್ಟೆ ವಿಭಾಗದ ನಿರ್ದೇಶಕ ಸತೀಶ್‌ ಸೋನಿ ನೋಟಿಫಿಕೇಷನ್‌ ಹೊರಡಿಸಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮತ್ತು ಜಿಲ್ಲಾ ಕೃಷಿ ಸಹಕಾರಿ ಸಂಸ್ಥೆಗಳು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ನೂತನ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದ್ದಾರೆ.

ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆ, ಅಗತ್ಯ ವಸ್ತುಗಳ (ತಿದ್ದುಪಡಿ) ಸುಗ್ರೀವಾಜ್ಞೆ 2020ಯನ್ನು ಸಂಸತ್‌ ಉಭಯ ಕಲಾಪಗಳಲ್ಲಿ ಅಂಗೀಕಾರ ಪಡೆದು ಇದೀಗ ಕಾನೂನಾತ್ಮಕ ರೂಪ ಪಡೆದುಕೊಂಡಿವೆ.

ಮಹಾ ವಿಕಾಸ್‌ ಅಘಾಡಿಯಾದ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್‌ ಮೂರು ಪಕ್ಷಗಳು ನೂತನ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌, ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಹಾಗೂ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರ ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಮೊನ್ನೆಯಷ್ಟೇ ಹೇಳಿಕೆ ನೀಡಿದ್ದರು.

ABOUT THE AUTHOR

...view details