ಕರ್ನಾಟಕ

karnataka

ETV Bharat / bharat

'ಮಹಾ' BREAKING: ಸಿಎಂ ಫಡ್ನವೀಸ್, ಡಿಸಿಎಂ ಅಜಿತ್ ಪವಾರ್ ರಾಜೀನಾಮೆ - ಮಹಾರಾಷ್ಟ್ರದಲ್ಲಿ ಫಡ್ನವೀಸ್ ಸರ್ಕಾರ

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಹಾಗು ಡಿಸಿಎಂ ಸ್ಥಾನಕ್ಕೆ ಅಜಿತ್‌ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ.

Maharshtra Politics
'ಮಹಾ' ರಾಜಕೀಯ

By

Published : Nov 26, 2019, 2:52 PM IST

Updated : Nov 26, 2019, 5:11 PM IST

ಮುಂಬೈ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಡಿಸಿಎಂ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದ ದೇವೇಂದ್ರ ಫಡ್ನವೀಸ್ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿಗೆ ರಾಜೀನಾಮೆ ಸಲ್ಲಿಸಿದ ದೇವೇಂದ್ರ ಫಡ್ನವೀಸ್

ನಾಳೆ ವಿಶ್ವಾಸಮತ ಯಾಚನೆ ನಡೆಯಲಿದ್ದು, ಇದಕ್ಕೂ ಮುನ್ನ ನಡೆದ ಈ ಬೆಳವಣಿಗೆ ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಪ್ರಧಾನಿ ಕಚೇರಿಯಲ್ಲಿ ಸಭೆ:

ಮಹಾರಾಷ್ಟ್ರ ರಾಜಕೀಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಕಚೇರಿಯಲ್ಲಿ ಸಭೆ ನಡೆದಿದೆ. ಈ ವೇಳೆ ಗೃಹಸಚಿವ ಅಮಿತ್ ಶಾ ಹಾಗೂ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹಾಜರಿದ್ದರು.

ಸಂಜೆ ಮಹಾಮೈತ್ರಿ ಸಭೆ:

ಎನ್​​ಸಿಪಿ-ಶಿವಸೇನೆ ಹಾಗೂ ಕಾಂಗ್ರೆಸ್​ ಮಹಾಮೈತ್ರಿ ಸಭೆಯನ್ನು ಸಂಜೆ 5 ಗಂಟೆಗೆ ಕರೆಯಲಾಗಿದೆ. ಈ ವೇಳೆ ಮೂರೂ ಪಕ್ಷದ ಎಲ್ಲ ಶಾಸಕರು ಹಾಜರಿರುವಂತೆ ಸೂಚಿಸಲಾಗಿದೆ.

Last Updated : Nov 26, 2019, 5:11 PM IST

ABOUT THE AUTHOR

...view details