ಜಾರ್ಖಂಡ್: ಇಲ್ಲಿನ ಹಜಾರಿಬಾಗ್ನಲ್ಲಿರುವ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಪ್ರತಿಮೆಯು ಧ್ವಂಸಗೊಂಡಿರುವ ರೀತಿಯಲ್ಲಿ ಪತ್ತೆಯಾಗಿದೆ.
ಜಾರ್ಖಂಡ್ನಲ್ಲಿ ಗಾಂಧಿ ಪ್ರತಿಮೆ ಧ್ವಂಸ: ತನಿಖೆ ಚುರುಕುಗೊಳಿಸಿದ ಪೊಲೀಸರು - ಹಜಾರಿಬಾಗ್ನಲ್ಲಿ ಗಾಂಧಿ ಪ್ರತಿಮೆ ಧ್ವಂಸ
ಜಾರ್ಖಂಡ್ನ ಹಜಾರಿಬಾಗ್ನಲ್ಲಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆಯು ಧ್ವಂಸಗೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲಿಸಿ, ಸ್ಥಳೀಯರನ್ನು ಪ್ರಶ್ನಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಜಾರ್ಖಂಡ್ನಲ್ಲಿ ಗಾಂಧಿ ಪ್ರತಿಮೆ ಧ್ವಂಸ
ಘಟನೆ ನಡೆದಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪ್ರತಿಮೆ ತಾನಾಗಿಯೇ ಬಿದ್ದಿರುವುದೇ ಅಥವಾ ಕಿಡಿಗೇಡಿಗಳಿಂದ ಧ್ವಂಸಗೊಳಿಸಲಾಗಿದೆಯೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.
ಸುತ್ತಮುತ್ತಲು ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲಿಸಿ, ಸ್ಥಳೀಯರನ್ನು ಪ್ರಶ್ನಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.