ಗಾಜಿಯಾಬಾದ್(ಉತ್ತರ ಪ್ರದೇಶ): ಆಕಸ್ಮಿಕವಾಗಿ ಮರದ ಪಾಲಿಶ್ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗಾಜಿಯಾಬಾದ್‌ನ ಸಾಹಿಬಾಬಾದ್‌ನಲ್ಲಿ ನಡೆದಿದೆ.
ಯುಪಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸಟ್ಟು ಭಸ್ಮ - nationwide lockdown
ಉತ್ತರ ಪ್ರದೇಶದ ಗಾಜಿಯಾಬಾದ್‌ನ ಸಾಹಿಬಾಬಾದ್‌ನಲ್ಲಿ ಮರದ ಪಾಲಿಶ್ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಮರದ ತುಂಡುಗಳು ಬೆಂಕಿಗಾಹುತಿಯಾಗಿವೆ.
ಉತ್ತರ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರೀ ಬೆಂಕಿ ಅವಘಡ
ಇನ್ನು ದೇಶದ್ಯಾಂತ ಲಾಕ್ಡೌನ್ ಇರುವ ಹಿನ್ನೆಲೆ ಕಾರ್ಖಾನೆಯಲ್ಲಿ ಕಾರ್ಮಿಕರಿರಲಿಲ್ಲ. ಇದರಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಮೊದಲು ಕಾರ್ಖಾನೆಯ ಒಂದು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕಾರ್ಖಾನೆ ತುಂಬಾ ಹರಡಿದೆ. ಲಕ್ಷಾಂತರ ರೂ. ಮೌಲ್ಯದ ಮರದ ತುಂಡುಗಳು ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.