ನವದೆಹಲಿ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಇತರ ಆರೋಪಿಗಳು ಇಂದು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಪ್ರಕರಣದ ವಿಚಾರಣೆಯನ್ನು ಮುಂಬೈನ ಎಸ್‌ಪಿಎಲ್ ಎನ್‌ಐಎ ನ್ಯಾಯಾಲಯ ನಾಳೆಗೆ ಮುಂದೂಡಿದೆ. ಬಿಜೆಪಿ ಸಂಸದ ಪ್ರಜ್ಞಾ ಸಿಂಗ್ ಠಾಕೂರ್ ಆರೋಗ್ಯ ಮತ್ತು ಭದ್ರತಾ ಆಧಾರದ ಮೇಲೆ ನ್ಯಾಯಾಲಯಕ್ಕೆ ದೈನಂದಿನ ಹಾಜರಾತಿಯಿಂದ ವಿನಾಯಿತಿ ಕೋರಿದ್ದಾರೆ. ನ್ಯಾಯಾಲಯವು ಅವರ ಅರ್ಜಿ ಸ್ವೀಕರಿಸಿದ್ದು, ಕೇಳಿದಾಗಲೆಲ್ಲಾ ನ್ಯಾಯಾಲಯಕ್ಕೆ ಹಾಜರಾಗುವಂತೆ ಪ್ರಜ್ಞಾ ಸಿಂಗ್ ಠಾಕೂರ್ ನ್ಯಾಯಾಲಯ ಸೂಚನೆ ನೀಡಿದೆ.
2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಪ್ರಜ್ಞಾ ಪರ ವಕೀಲ ಜೆ.ಪಿ. ಮಿಶ್ರಾ ಅವರು ಇಂದು ಹಾಜರಾಗಲಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಳಂಬ ಮಾಡುತ್ತಿದೆ ಎಂದು ಡಿಸೆಂಬರ್ 19 ರಂದು ಮಿಶ್ರಾ ಹೇಳಿದ್ದರು.
ಠಾಕೂರ್ ಮಾತ್ರವಲ್ಲದೇ ಲೆಫ್ಟಿನೆಂಟ್ ಕರ್ನಲ್ ಪ್ರಸಾದ ಪುರೋಹಿತ್, ಚತುರ್ವೇದಿ ಮತ್ತು ಕುಲಕರ್ಣಿ, ಅಜಯ್ ರಾಹಿರ್ಕರ್, ನಿವೃತ್ತ ಮೇಜರ್ ರಮೇಶ್ ಉಪಾಧ್ಯಾಯ ಮತ್ತು ಸುಧಾಕರ್ ದ್ವಿವೇದಿ ಕೂಡ ಪ್ರಕರಣದ ಆರೋಪಿಗಳಾಗಿದ್ದಾರೆ. ಹಿಂದಿನ ವಿಚಾರಣೆಗೆ ಏಳು ಆರೋಪಿಗಳಲ್ಲಿ ನಾಲ್ವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಮತ್ತು ಸುಧಾಕರ್ ಚತುರ್ವೇದಿ ಸೇರಿದಂತೆ ಮೂವರು ಆರೋಪಿಗಳು ಡಿಸೆಂಬರ್ 19 ರಂದು ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಅವರ ಮೇಲೆ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ), ಸ್ಫೋಟಕ ಪದಾರ್ಥಗಳ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅನ್ವಯ ಪ್ರಕರಣ ದಾಖಲಾಗಿದೆ.
ಓದಿ : ಹಕ್ಕಿ ಜ್ವರ: ಹರಿಯಾಣದಲ್ಲಿ ಸಾವಿರ ಕೋಳಿ, ಮಧ್ಯಪ್ರದೇಶದಲ್ಲಿ 200 ಕಾಗೆಗಳ ಸಾವು
2008 ರಲ್ಲಿ ಮಾಲೇಗಾಂವ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಆರು ಮಂದಿ ಸಾವನ್ನಪ್ಪಿದರು. ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದ್ದು, ಮುಂಬೈ ಉಚ್ಚ ನ್ಯಾಯಾಲಯ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವಂತೆ ಪ್ರಕರಣದ ಮತ್ತೊಬ್ಬ ಆರೋಪಿ ಸಮೀರ್ ಕುಲಕರ್ಣಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮುಂಬೈ ಹೈಕೋರ್ಟ್‌ನಲ್ಲಿ ವಿಶೇಷ ನ್ಯಾಯಾಲಯ ನೀಡಿದ ಉತ್ತರದಲ್ಲಿ, ಈ ನಿಟ್ಟಿನಲ್ಲಿ ನಿಯಮಿತ ವಿಚಾರಣೆಯನ್ನು ಡಿಸೆಂಬರ್ 2020 ರಿಂದ ಪ್ರಾರಂಭಿಸಲಾಗುವುದು ಎಂದು ಅಫಿಡವಿಟ್ ಸಲ್ಲಿಸಲಾಗಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ ಅಫಿಡವಿಟ್‌ನಲ್ಲಿ ಕಳೆದ ಆರು ತಿಂಗಳಲ್ಲಿ ಕೇವಲ 14 ಸಾಕ್ಷಿಗಳು ಸಾಕ್ಷ್ಯ ನುಡಿದಿದ್ದಾರೆ ಮತ್ತು 300 ಸಾಕ್ಷಿಗಳು ಇನ್ನೂ ಸಾಕ್ಷ್ಯ ನೀಡಿಲ್ಲ.