ಕೋಲ್ಕತ್ತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಗರದಲ್ಲಿ ರಾಜ್ಯದ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಚರ್ಚಿಸಲು ಸರ್ವಪಕ್ಷ ಸಭೆ ನಡೆಸಲಿದ್ದಾರೆ.
ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥರು, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ -19 ರೋಗಿಗಳಿಗೆ ಹಾಸಿಗೆಗಳ ಲಭ್ಯತೆ ಮತ್ತು ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಹಾಸಿಗೆಗಳನ್ನು ಪ್ರತಿದಿನವೂ ನವೀಕರಿಸಬೇಕಾಗಿದೆ ಎಂದು ಹೇಳಿದರು.
ಮೇ ತಿಂಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದ ಟಿಎಂಸಿ ಶಾಸಕ ತಮೋನಾಶ್ ಘೋಷ್ ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಾಸಕ ತಮೋನಾಶ್ ಘೋಷ್ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 1998 ರಿಂದ ಫಾಲ್ಟಾ ಮತ್ತು ಪಕ್ಷದ ಖಜಾಂಚಿಯಾಗಿ 3 ಬಾರಿ ಶಾಸಕರಾಗಿದ್ದರು. ಇಂದು ನಮ್ಮನ್ನು ಅಗಲಿರುವುದು ತೀವ್ರ ನೋವುಂಟಾಗಿದೆ. 35 ವರ್ಷಗಳಿಂದ ನಮ್ಮೊಂದಿಗಿದ್ದರು, ಅವರು ಜನರ ಮತ್ತು ಪಕ್ಷಕ್ಕಾಗಿ ದುಡಿದಿದ್ದರು ಎಂದು ಟ್ವೀಟ್ ಮಾಡಿದ್ದಾರೆ.
ಶಾಸಕರ ಅಗಲಿಕೆಯ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಮತ್ತು ಅವರ ಅಭಿಮಾನಿಗಳಿಗೆ ಕೊಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಒಟ್ಟು 14,358 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 569 ಜನ ಬಲಿಯಾಗಿದ್ದಾರೆ.