ಕೋಲ್ಕತ್ತಾ: ಎಂಟು ರಾಜ್ಯಸಭಾ ಸದಸ್ಯರನ್ನು ಅಮಾನತುಗೊಳಿಸಿದ್ದನ್ನು ಟಿಎಂಸಿ ಖಂಡಿಸಿದ್ದು, ಇದು ಕೇಂದ್ರ ಸರ್ಕಾರದ "ನಿರಂಕುಶಾಧಿಕಾರ ಮನಸ್ಥಿತಿಯ" ಪ್ರತಿಫಲನ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ
ಬಿಜೆಪಿ ಪ್ರಜಾಪ್ರಭುತ್ವವನ್ನು ಕೊಂದಿದೆ ಎಂದು ಆರೋಪಿಸಿರುವ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, "ಫ್ಯಾಸಿಸ್ಟ್" ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಮತ್ತು ಬೀದಿಗಳಲ್ಲಿ ಹೋರಾಡುವುದಾಗಿ ಘೋಷಿಸಿದ್ದಾರೆ.
‘ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ಹೋರಾಡಿದ 8 ಸಂಸದರನ್ನು ಅಮಾನತುಗೊಳಿಸಿರುವುದು ದುರದೃಷ್ಟಕರ ಮತ್ತು ಪ್ರಜಾಪ್ರಭುತ್ವದ ರೂಪ ಮತ್ತು ತತ್ವಗಳನ್ನು ಗೌರವಿಸದ ಈ ನಿರಂಕುಶಾಧಿಕಾರ ಸರ್ಕಾರದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಇದಕ್ಕೆ ನಾವು ತಲೆಬಾಗುವುದಿಲ್ಲ. ನಾವು ಈ ಫ್ಯಾಸಿಸ್ಟ್ ಸರ್ಕಾರವನ್ನು ವಿರೊಧಿಸಿ ಸಂಸತ್ತಿನಲ್ಲಿ ಮತ್ತು ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ.
ಎರಡು ಕೃಷಿ ಮಸೂದೆಗಳನ್ನು ಅಂಗೀಕರಿಸುವಾಗ ಪ್ರತಿಪಕ್ಷದ ಸದಸ್ಯರು ಅಶಿಸ್ತಿನಿಂದ ವರ್ತಿಸಿದ್ದಾರೆ ಎಂದು ಆರೋಪಿಸಿ ಎಂಟು ರಾಜ್ಯಸಭಾ ಸದಸ್ಯರನ್ನು ಅಮಾನತುಗೊಳಿಸಲಾಗಿದೆ.